ವಿಜಯಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಜಾಸ್ತಿಯಾಗಿವೆ.
ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧದ ಹಳೇ ಪ್ರಕರಣವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಎಸ್‌ಐಟಿ ರಾಜ್ಯಪಾಲರಿಗೆ ಮನವಿ ಮಾಡಿದೆ.
ಇದರಿಂದ ಕೆರಳಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸಿದ್ದರಾಮಯ್ಯರಂತಹ ನೂರು ಜನ ಬಂದರೂ ನನ್ನನ್ನು ಅರೆಸ್ಟ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ಈ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿಯನ್ನು ಬಂಧಿಸಲು ನೂರು ಸಿದ್ದರಾಮಯ್ಯ ಅಲ್ಲ ಒಬ್ಬ ಕಾನ್ಸ್‌ಟೇಬಲ್ ಸಾಕು. ಅರೆಸ್ಟ್ ಮಾಡಿಸುವ ಕೆಲಸ ನನ್ನದಲ್ಲ ಪೊಲೀಸರದ್ದು ಎಂದು ಟಾಂಗ್ ಕೊಟ್ಟಿದ್ದಾರೆ.
ಈ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಕೂಡ ಬಂಧನದ ಭೀತಿ ಎದುರಾಗಲಿದೆ ಎನ್ನಲಾಗಿದ್ದು, ರಾಜ್ಯಪಾಲರು ಪ್ರಸಿಕ್ಯೂಷನ್‌ಗೆ ಅನುಮತಿ ನೀಡಿದರಷ್ಟೇ ಮುಂದಿನ ಬೆಳವಣಿಗೆ ಹೇಗಾಗಲಿದೆ ಎಂಬುದು ತಿಳಿಯಲಿದೆ.
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…
ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…