Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು(ಜು.6) ಪ್ರಮಾಣ ವಚನ ಸ್ವೀಕಾರ ಮಾಡಿದರು.

ರಾಜಭವನದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾತ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.‌

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಯುಕ್ತರಾದ ನ್ಯಾಯಮೂರ್ತಿ ಬಿ.ಎಸ್‌ ಪಾಟೀಲ್, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೈಕೋರ್ಟ್‌ ನ್ಯಾಯಮೂರ್ತಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Tags: