Mysore
27
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಸ್ಥಳೀಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ವಿತರಣೆ: ಕೆ.ಎಚ್‌.ಮುನಿಯಪ್ಪ

ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್‌ ಕಾರ್ಡ್‌ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿ.9) ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಪಡಿತರ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾಗಿದ್ದು, ಅದರಲ್ಲಿ ಕೆಲವು ಲೋಪದೋಷಗಳು ಕಂಡುಬಂದ ಕಾರಣ ಅವುಗಳನ್ನು ತಡೆಹಿಡಿಯಲಾಗಿದೆ. ಅರ್ಹರ ಬಿಪಿಎಲ್‌ ಪಡಿತರ ಕಾರ್ಡ್‌ಗಳನ್ನು ರದ್ದಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದತ್ತಾಂಸ ಸಂಗ್ರಹಿಸಿ ಅರ್ಹರಿಗೆ ಕಾರ್ಡ್‌ ವಿತರಿಸಲಾಗುವಂತೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸುಮಾರು ಶೇ.65% ರಿಂದ 75%ರಷ್ಟು ಜನಸಂಖ್ಯೆಗೆ ಬಿಪಿಎಲ್‌ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ಪರಿಷ್ಕರಿಸಿದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ಅನ್ನು ನೀಡಲಾಗುವುದು ಎಂದು ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ.

Tags:
error: Content is protected !!