ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್ ಕಾರ್ಡ್‌ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿ.9) ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಪಡಿತರ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾಗಿದ್ದು, ಅದರಲ್ಲಿ ಕೆಲವು ಲೋಪದೋಷಗಳು ಕಂಡುಬಂದ ಕಾರಣ ಅವುಗಳನ್ನು ತಡೆಹಿಡಿಯಲಾಗಿದೆ. ಅರ್ಹರ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ರದ್ದಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದತ್ತಾಂಸ ಸಂಗ್ರಹಿಸಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವಂತೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು ಶೇ.65% ರಿಂದ 75%ರಷ್ಟು ಜನಸಂಖ್ಯೆಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ಪರಿಷ್ಕರಿಸಿದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಹರಿಗೆ ಬಿಪಿಎಲ್ ಕಾರ್ಡ್‌ಅನ್ನು ನೀಡಲಾಗುವುದು ಎಂದು ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…