ಬೆಂಗಳೂರು: ನಮ್ಮ ಪಕ್ಷದ ಹೈಕಮಾಂಡ್ ದಲಿತ ಸಮಾವೇಶ ಮಾಡಬೇಡಿ ಎಂದು ಹೇಳಿಲ್ಲ, ಹೈಕಮಾಂಡ್ ಸೂಚನೆಯಂತೆ ಮುಂದಿನ ದಿನಗಳಲ್ಲಿ ಸಮಾವೇಶ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ಗೆ ಸಮಾವೇಶ ಮಾಡುವ ಬಗ್ಗೆ ಸಚಿವರಾದ ಕೆ.ಎನ್.ರಾಜಣ್ಣ, ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕರು ಮನವಿ ಮಾಡಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ಮಾಡಿದ್ದ ಎಸ್‌ಸಿ-ಎಸ್‌ಟಿ ಸಮಾವೇಶ ಯಶಸ್ವಿಯಾಗಿದ್ದು, ನಮ್ಮ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿತ್ತು ಎಂದು ಹೇಳಿದರು.
ನಮ್ಮ ಪಕ್ಷದ ಹೈಕಮಾಂಡ್ ನಾಯಕರೇ ಚಿತ್ರದುರ್ಗದಲ್ಲಿ ಸಮಾವೇಶ ಮಾಡಬೇಕೆಂದು ಹೇಳಿದ್ದರು. ಅಂತೆಯೇ ಮುಂದಿನ ದಿನಗಳಲ್ಲಿ ಸಮಾವೇಶದ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದರು.





