ಬೆಂಗಳೂರು: ನಮ್ಮ ಪಕ್ಷದ ಹೈಕಮಾಂಡ್ ದಲಿತ ಸಮಾವೇಶ ಮಾಡಬೇಡಿ ಎಂದು ಹೇಳಿಲ್ಲ, ಹೈಕಮಾಂಡ್ ಸೂಚನೆಯಂತೆ ಮುಂದಿನ ದಿನಗಳಲ್ಲಿ ಸಮಾವೇಶ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್ಗೆ ಸಮಾವೇಶ ಮಾಡುವ ಬಗ್ಗೆ ಸಚಿವರಾದ ಕೆ.ಎನ್.ರಾಜಣ್ಣ, ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕರು ಮನವಿ ಮಾಡಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ಮಾಡಿದ್ದ ಎಸ್ಸಿ-ಎಸ್ಟಿ ಸಮಾವೇಶ ಯಶಸ್ವಿಯಾಗಿದ್ದು, ನಮ್ಮ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿತ್ತು ಎಂದು ಹೇಳಿದರು.
ನಮ್ಮ ಪಕ್ಷದ ಹೈಕಮಾಂಡ್ ನಾಯಕರೇ ಚಿತ್ರದುರ್ಗದಲ್ಲಿ ಸಮಾವೇಶ ಮಾಡಬೇಕೆಂದು ಹೇಳಿದ್ದರು. ಅಂತೆಯೇ ಮುಂದಿನ ದಿನಗಳಲ್ಲಿ ಸಮಾವೇಶದ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ಮೈಸೂರು : ಇಲ್ಲಿನ ವಿಜಯನಗರದ ನಾಲ್ಕನೇ ಹಂತದಲ್ಲಿ ರಸ್ತೆ ಬದಿ ಕಸ ಸುರಿಯುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಸ್ತೆ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಲಿಯಾದ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ.…
ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್ ರಾಜ್ಕುಮಾರ್ ಅವರ 50ನೇ ಹುಟ್ಟುಹಬ್ಬದ ದಿನದಂದು…
ಗೋಣಿಕೊಪ್ಪಲು : ತೋಟದ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಇಲ್ಲಿನ ಸಮೀಪದ…
ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಅನುದಾನ ಹಂಚಿಕೆ ಮಾಡಿಲ್ಲ, ಬದಲಿಗೆ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಧೋರಣೆ ತೋರುತ್ತಿದೆ…
ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ಟಿಎಎಸ್ಎಂಸಿ ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ಆಯೋಜಿಸಿದ್ದ ತಮಿಳುನಾಡು…