Mysore
25
overcast clouds

Social Media

ಭಾನುವಾರ, 16 ಮಾರ್ಚ್ 2025
Light
Dark

ಸದ್ಗುರು ಅವರೊಂದಿಗೆ ಡಿಕೆಶಿ ವೇದಿಕೆ ಹಂಚಿಕೆ| ಡಿಸಿಎಂ ಡಿಕೆಶಿ ಅವರೇ ಉತ್ತರಿಸಬೇಕು: ಕೆ.ಎನ್‌.ರಾಜಣ್ಣ

ಹಾಸನ: ಸದ್ಗುರು ಜಗ್ಗಿ ವಾಸುದೇವ್‌ ಅವರೊಂದಿಗೆ ಮಹಾಶಿವರಾತ್ರಿಯಂದು ವೇದಿಕೆ ಹಂಚಿಕೊಂಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಉತ್ತರಿಸಬೇಕೇ ಹೊರತು, ಅದನ್ನು ನಾವು ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಹಾಸನದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾಶಿವರಾತ್ರಿಯಂದು ಕೊಯಮತ್ತೂರ್‌ನಲ್ಲಿ ಸದ್ಗುರು ಜಗ್ಗಿ ವಾಸುದೇವ್‌ ಅವರೊಟ್ಟಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ವೇದಿಕೆ ಹಂಚಿಕೊಂಡಿರುವುದು ಎಷ್ಟು ಸರಿ ಅಥವಾ ತಪ್ಪು, ಅವರ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನಿಸುತ್ತದೆ ಎಂಬುದನ್ನು ಅವರೇ ಹೇಳಬೇಕು ಎಂದರು.

ಈ ಹಿಂದೆ ಸದ್ಗುರು ಅವರು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಯಾರು? ಅವರು ನನಗೆ ತಿಳಿದೇ ಇಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ಅಂತಹವರೊಡನೆ ವೇದಿಕೆ ಹಂಚಿಕೆ ಮಾಡಿಕೊಳ್ಳುತ್ತಾರೆ ಅಂದರೆ, ಈ ಬಗ್ಗೆ ಅವರೇ ಉತ್ತರ ನೀಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags: