ಹಾಸನ: ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಮಹಾಶಿವರಾತ್ರಿಯಂದು ವೇದಿಕೆ ಹಂಚಿಕೊಂಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಉತ್ತರಿಸಬೇಕೇ ಹೊರತು, ಅದನ್ನು ನಾವು ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಹಾಸನದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾಶಿವರಾತ್ರಿಯಂದು ಕೊಯಮತ್ತೂರ್‌ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರೊಟ್ಟಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವೇದಿಕೆ ಹಂಚಿಕೊಂಡಿರುವುದು ಎಷ್ಟು ಸರಿ ಅಥವಾ ತಪ್ಪು, ಅವರ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನಿಸುತ್ತದೆ ಎಂಬುದನ್ನು ಅವರೇ ಹೇಳಬೇಕು ಎಂದರು.
ಈ ಹಿಂದೆ ಸದ್ಗುರು ಅವರು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಯಾರು? ಅವರು ನನಗೆ ತಿಳಿದೇ ಇಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ಅಂತಹವರೊಡನೆ ವೇದಿಕೆ ಹಂಚಿಕೆ ಮಾಡಿಕೊಳ್ಳುತ್ತಾರೆ ಅಂದರೆ, ಈ ಬಗ್ಗೆ ಅವರೇ ಉತ್ತರ ನೀಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…