Mysore
33
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಕೆ.ಎನ್.ರಾಜಣ್ಣ ಹೇಳಿಕೆ

Change in State Politics is Certain: Minister K.N. Rajanna

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವವರೆಗೆ ಪಕ್ಷ ಮತ್ತು ಸರ್ಕಾರದಲ್ಲಿ ಯಾವುದೇ ಬದಲಾವಣೆಗಳನ್ನು ತರದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಈ ಬೆಳವಣಿಗೆ ಕೈ ಪಾಳಯದ ಕೆಲ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಬಯಸುತ್ತಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳಾಗಲಿದೆ ಎಂದು ಹೇಳಿದ್ದು, ಈ ಹೇಳಿಕೆಗೆ ಭಾರೀ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಎಬ್ಬಿಸಿದೆ.

ರಾಜಣ್ಣ ಅವರು ತಮ್ಮ ಹೇಳಿಕೆ ಮೂಲಕ ಸಿದ್ದರಾಮಯ್ಯ ಅವರನ್ನು ಬದಲಿಸಿದ್ದೇ ಆದರೆ, ಪಕ್ಷದಲ್ಲಿ ಅಸಮಾಧಾನ ಭುಗಿಲೇಳಲಿದೆ ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ.

ಅನೇಕ ಶಾಸಕರು ಇತ್ತೀಚೆಗೆ ತಮ್ಮ ಕುಂದುಕೊರತೆಗಳನ್ನು ಹೇಳಲು ಶಿವಕುಮಾರ್ ಅವರನ್ನು ಭೇಟಿ ಮಾಡಲು ಪ್ರಾರಂಭಿಸಿದ್ದಾರೆ. ಈ ನಡುವೆ ಸಿದ್ದು ಪಾಳಯದ ನಾಯಕರು ರಾಜ್ಯ ಉಸ್ತುವಾರಿ ಹುದ್ದೆಯಲ್ಲಿರುವ ಸುರ್ಜೇವಾಲಾ ಅವರನ್ನು ಬದಲಾಯಿಸುವಂತೆ ಹೈಕಮಾಂಡ್‌ನ್ನು ಒತ್ತಾಯಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಆದರೆ, ರಾಹುಲ್ ಗಾಂಧಿಯವರು ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆ (ಎಸ್‍ಇಎಸ್-2015) ವಿಚಾರದಲ್ಲಿ ಸಿದ್ದರಾಮಯ್ಯ ಕಾರ್ಯಕ್ಷಮತೆಯ ಬಗ್ಗೆ ಅಸಮಾಧಾನಗೊಂಡಿದ್ದು, ಹೀಗಾಗಿಯೇ ಹೊಸ ಸಮೀಕ್ಷೆ ಕುರಿತ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.

Tags:
error: Content is protected !!