ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಿಂದೂತ್ವದ ಪರ ನಿಲುವು ಪ್ರಕಟಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಇವಾಗ ಬುದ್ಧಿ ಬಂದಿದೆ. ಅಂತೆಯೇ ಸಿಎಂ ಸಿದ್ದರಾಮಯ್ಯ ಅವಇಗೂ ಬುದ್ಧಿ ಬರಲಿ. ಆದರೆ ಡಿ.ಕೆ.ಶಿವಕುಮಾರ್ ಅವರ ಹಿಂದುತ್ವದ ನಿಲುವು ನಾಟಕವೋ ಅಥವಾ ನಿಜವೋ ಎಂಬುದನ್ನು ದೇವರು ನಿರ್ಧಾರಿಸುತ್ತಾನೆ ಎಂದರು.
ಸ್ವಾತಂತ್ರ್ಯದ ಪೂರ್ವದ ಕಾಂಗ್ರೆಸ್ಸಿಗರು ಹೋರಾಟ ಮಾಡಿದ್ದೇ ಹಿಂದುತ್ವವನ್ನು ಮತ್ತೆ ವೈಭವೀಕರಿಸುವ ಉದ್ದೇಶದಿಂದಲೇ, ಹಾಗಾಗಿ ಹಳೇ ಕಾಂಗ್ರೆಸ್ಸಿಗರ ರಕ್ತದಲ್ಲಿ ಹಿಂದುತ್ವ ಈಗಲೂ ಇದೆ. ಇಲ್ಲಿ ಎಲ್ಲರೂ ಧರ್ಮ ದ್ರೋಹಿಗಳಲ್ಲ, ಆದರೆ ಕೆಲವು ರಾಜಕೀಯ ನಾಯಕರು ಮತಬ್ಯಾಂಕ್‌ಗಾಗಿ ಮುಸಲ್ಮಾನರನ್ನು ಓಲೈಸುವ ನಿಟ್ಟಿನಲ್ಲಿ ನಾಟಕೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ಇನ್ನು ಮಹಾತ್ಮಗಾಂಧೀಜಿ ಅವರು ಸಹ ಹಿಂದೂತ್ವ ಪ್ರತಿಪಾದಿಸಿದ್ದರು. ಅವರ ಸಮಾಧಿ ಮೇಲೆ ಹೇ ರಾಮ್ ಎಂದು ಬರೆಯಲಾಗಿದೆಯೇ ಹೊರತು, ಹೇ ಅಲ್ಲ ಅಥವಾ ಹೇ ಯೇಸು ಎಂದು ಬರೆದಿಲ್ಲ. ಅಂತೆಯೇ ಡಿಕೆಶ ಅವರು ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಅವರಿಗೆ ಹಿಂದುತ್ವದ ಜಾಗೃತಿ ಉಂಟಾಗಿದೆ. ಹಿಂದೂತ್ವ ಬಿಜೆಪಿಯ ಸ್ವತ್ತೂ ಅಲ್ಲ, ಅದೂ ಸರ್ವ ಜನರ ಸುಖ ಬಯಸುವುದೇ ಹಿಂದುತ್ವ ಎಂದು ಹೇಳಿದರು.
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…