ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌.ಈಶರಪ್ಪ ಕಿಡಿ

ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ ನೀವು ಸಂಹಾರ ಆಗ್ತೀರಾ ಎಂದು     ಕೆ.ಎಸ್‌.ಈಶರಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಶಿವಮೊಗ್ಗ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಕುಂಕುಮ ಹಚ್ಚಲು ಹೋದರೆ ಮೈಮೇಲೆ ದೆವ್ವ ಬಂದ ರೀತಿಯಲ್ಲಿ ಆಡುತ್ತಿದ್ದರು. ಆದರೆ, ಇದೀಗ ಅವರೇ ದೇವಾಲಯಗಳಿಗೆ ಹೋಗಿ ಕುಂಕುಮ ಹಚ್ಚಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಅಕ್ಟೋಬರ್.18ಕ್ಕೆ ಮಂಡಿಸುತ್ತೇನೆ ಎಂದು ಹೇಳಿದ್ದರು. ಆದರೆ, ಇದೀಗ 18ಕ್ಕೆ ಆಗಲ್ಲ ಮುಂದೂಡುತ್ತೇನೆ ಎಂದಿದ್ದಾರೆ. ಅಲ್ಲದೇ, ಅಕ್ಟೋಬರ್‌.25ಕ್ಕೆ ಮಂಡನೆ ಮಾಡುತ್ತೇವೆ ಎನ್ನುತ್ತಾರೆ. ನೋಡೋಣ ಮುಂದಿನಗಳಲ್ಲಿ ಏನಾಗುತ್ತದೆ ಎಂಬುದು ತಿಳಿಯುತ್ತದೆ. ಜಾತಿ ಜನಗಣತಿಗಾಗಿ ಒಂಭತ್ತು ವರ್ಷಗಳೇ ಕಾದಿದ್ದೇವೆ ಇನ್ನೂ ಒಂದು ವಾರಗಳು ಕಾಯಲು ಆಗೋದಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

27 mins ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

39 mins ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

42 mins ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

49 mins ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

1 hour ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

2 hours ago