ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ ನೀವು ಸಂಹಾರ ಆಗ್ತೀರಾ ಎಂದು ಕೆ.ಎಸ್.ಈಶರಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ಶಿವಮೊಗ್ಗ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಕುಂಕುಮ ಹಚ್ಚಲು ಹೋದರೆ ಮೈಮೇಲೆ ದೆವ್ವ ಬಂದ ರೀತಿಯಲ್ಲಿ ಆಡುತ್ತಿದ್ದರು. ಆದರೆ, ಇದೀಗ ಅವರೇ ದೇವಾಲಯಗಳಿಗೆ ಹೋಗಿ ಕುಂಕುಮ ಹಚ್ಚಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಅಕ್ಟೋಬರ್.18ಕ್ಕೆ ಮಂಡಿಸುತ್ತೇನೆ ಎಂದು ಹೇಳಿದ್ದರು. ಆದರೆ, ಇದೀಗ 18ಕ್ಕೆ ಆಗಲ್ಲ ಮುಂದೂಡುತ್ತೇನೆ ಎಂದಿದ್ದಾರೆ. ಅಲ್ಲದೇ, ಅಕ್ಟೋಬರ್.25ಕ್ಕೆ ಮಂಡನೆ ಮಾಡುತ್ತೇವೆ ಎನ್ನುತ್ತಾರೆ. ನೋಡೋಣ ಮುಂದಿನಗಳಲ್ಲಿ ಏನಾಗುತ್ತದೆ ಎಂಬುದು ತಿಳಿಯುತ್ತದೆ. ಜಾತಿ ಜನಗಣತಿಗಾಗಿ ಒಂಭತ್ತು ವರ್ಷಗಳೇ ಕಾದಿದ್ದೇವೆ ಇನ್ನೂ ಒಂದು ವಾರಗಳು ಕಾಯಲು ಆಗೋದಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…