ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಬೋಧನಾ ಅರ್ಹತೆಗಾಗಿ ನಾಳೆ ಕೆ-ಸೆಟ್ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ.
ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಇದನ್ನು ಓದಿ: ಜನವರಿ 13ಕ್ಕೆ KSET ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯ
ಈ ಬಾರಿ ಕೆ-ಸೆಟ್ ಪರೀಕ್ಷೆಯಲ್ಲಿ ಮುಖ ಚಹರೆ ಪತ್ತೆ ತಂತ್ರಜ್ಞಾನ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುವುದು. ಈ ಹಿಂದಿನ ಎಲ್ಲಾ ಪರೀಕ್ಷೆಗಳಲ್ಲಿ ಇದ್ದಂತೆ ವಸ್ತ್ರ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕಿದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ.
ಒಟ್ಟು 33 ವಿಷಯಗಳಿಗೆ ನಡೆಯಲಿರುವ ಕೆ-ಸೆಟ್ ಪರೀಕ್ಷೆಗಾಗಿ 1.36 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…