ರಾಜ್ಯ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್

ದಾವಣಗೆರೆ: ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ‌ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ಕನಕ ನೌಕರರ ಬಳಗ ಮತ್ತು ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

“ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಮಾತಿದೆ. ಇವತ್ತು ನಮ್ಮ ಸಮುದಾಯದ ನಾನು ಮತ್ತು ಈ ಮಕ್ಕಳು ಪ್ರತಿಭಾವಂತರಾಗಿ ಇಲ್ಲಿ ಗೌರವಿಸಲ್ಪಡುತ್ತಿದ್ದೇವೆ ಎಂದರೆ ಇದಕ್ಕೆ ನಮ್ಮ ಹಿರಿಯರು ಮತ್ತು ಹಿಂದಿನವರು ನಡೆಸಿದ ಹೋರಾಟಗಳು ಕಾರಣ.

ಅಕ್ಷರ ಕಲಿತರೆ ಕಿವಿಗೆ ಕಾದ ಸೀಸ ಸುರಿಯುವ ಶಿಕ್ಷೆ ವಿಧಿಸುತ್ತಿದ್ದ ಕಾಲದಿಂದ ನಮ್ಮದೇ ಆದ ವಿದ್ಯಾವರ್ಧಕ ಸಂಘ ಕಟ್ಟಿಕೊಂಡು SSLC ಯಿಂದ MBBS ವರೆಗೂ ಸಾವಿರಾರು ಪ್ರತಿಭಾವಂತರನ್ನು ಪುರಸ್ಕರಿಸುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಈ ಸಾಧನೆಯ ಹಿಂದೆ ಇರುವ ಪ್ರತೀ ಹೆಜ್ಜೆ ಗುರುತುಗಳನ್ನೂ ನಾವು ಅರಿತುಕೊಳ್ಳಬೇಕಿದೆ ಎಂದರು.

ದಾಸಶ್ರೇಷ್ಠ ಕನಕದಾಸರು ಅಂದರೆ ನಮಗೆಲ್ಲಾ ಭಕ್ತಿ ಬರುತ್ತದೆ. ಆದರೆ ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ.

ಎಳೆಯ ವಯಸ್ಸಿನಿಂದಲೂ ಕನಕರ ಬಗ್ಗೆ ಮಾತನಾಡುವಾಗ ಕನಕರ ಹೋರಾಟವನ್ನು ತಿಳಿಯುವುದರ ಬದಲಾಗಿ ಕನಕನ ಕಿಂಡಿಯ ಬಗ್ಗೆ ತಿಳಿಯುವುದರಲ್ಲಿ ನಮಗೆ ಹೆಚ್ಚು ಉತ್ಸಾಹ ಮೂಡಿಸಿರುವುದರ ಹಿಂದೆಯೂ ಒಂದು ಸಾಂಸ್ಕೃತಿಕ ರಾಜಕಾರಣ ಇದೆಯಲ್ಲವೇ ಎಂದು ಪ್ರಶ್ನಿಸಿದರು.

ಕಾಗಿನೆಲೆ ಮಹಾಸಂಸ್ಥಾನ, ಕನಕ ಗುರುಪೀಠದ ಪೂಜ್ಯರಾದ ಜಗದ್ಗುರು ಶ್ರೀ ಡಾ.ನಿರಂಜನಾನಂದಪುರಿ ಮಹಾ ಗುರುಗಳು ದಿವ್ಯ ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ವಿವಿ ಕುಲಪತಿ ಡಾ.ಬಿ.ಕೆ.ರವಿ, ಬಾಲ ಭವನ ಅಧ್ಯಕ್ಷ ಬಿ.ಆರ್. ನಾಯ್ಡು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

11 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

12 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

12 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

13 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

13 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

17 hours ago