ಕಾರವಾರ: ಇಲ್ಲಿನ ಸದಾಶಿವಗಢದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಳೆಯ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಈ ಸೇತುವೆ ಬಳಕೆಯಲ್ಲಿಲ್ಲ ಮತ್ತು ದುರಸ್ತಿ ಕಾರ್ಯ ಕೂಡ ನಡೆಯುತ್ತಿತ್ತು ಎನ್ನಲಾಗಿದೆ.
ಪಿಲ್ಲರ್ ಒಂದು ಭಾಗ ಕುಸಿದು ಬಿದ್ದಿರುವುದಿಂದ ಸ್ಲ್ಯಾಬ್ ಮೇಲೆದ್ದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕಾಳಿ ಸೇತುವೆ ಕುಸಿತಗೊಂಡಿತ್ತು. ಕುಸಿದು ಬಿದ್ದಿದ್ದ ಕಾಳಿ ಸೇತುವೆ ದುರಸ್ತಿ ಮಾಡುತ್ತಿದ್ದಾಗ ಫಿಲ್ಲರ್ ಕುಸಿದು ಸ್ಲ್ಯಾಬ್ ಸಹಿತ ನದಿಗೆ ಬಿದ್ದ ಪರಿಣಾಮ ಹೊಸ ಸೇತುವೆಗೆ ಸಂಭವಿಸಬಹುದಾದ ಬಹುದೊಡ್ಡ ಅನಾಹುತ ತಪ್ಪಿದೆ.
ಗುರುವಾದ ಇದೇ ಸ್ಲ್ಯಾಬ್ ಮೇಲೆ 4-5 ಕಾರ್ಮಿಕರು ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಕಳೆದ ನಾಲ್ಕು ತಿಂಗಳಿನಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಕೆಲ ದಿನ ರಾತ್ರಿ 12 ಗಂಟೆಯವರೆಗೂ ಕೆಲಸ ನಡೆಸುತ್ತಿದ್ದರು. ಆದರೆ ಶುಕ್ರವಾರ ಅನಾಹುತ ಸಂಭವಿಸುವ ವೇಳೆ ಕೆಲಸಗಾರರಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಕಳೆದ ಆಗಸ್ಟ್.7ರಂದು ಮಳೆಯ ಅಬ್ಬರಕ್ಕೆ ಕಾಳಿ ಸೇತುವೆ ಕುಸಿದು ಬಿದ್ದಿತ್ತು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…