Mysore
17
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

ಕಲಬುರಗಿ: ನೇಣು ಬಿಗಿದು ಪೊಲೀಸ್ ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಕಲಬುರಗಿ: ಕೌಟುಂಬಿಕ ಕಲಹದಿಂದ ಮನನೊಂದ ಪೊಲೀಸ್‌ ಕಾನ್‌ಸ್ಟೇಬಲ್‌ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ಜರುಗಿದೆ.

ನಗರದ ಹೊರಹೊಲಯದ ಉದನೂರು ರಸ್ತೆಯಲ್ಲಿರುವ ಜಮೀನಿನಲ್ಲಿ ಭಾನುವಾರ(ಜೂ.23) ನೇಣುಬಿಗಿದುಕೊಂಡಿದ್ದಾರೆ. ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ದೊಡ್ಡೇಶ್(‌40) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್.

ದೊಡ್ಡೇಶ್‌ ನಗರದ ಹೈಕೋರ್ಟ್‌ ಕಲಬುರಗಿ ಪೀಠ ಸಮೀಪದ ಬಡಾವಣೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಲಹಗಳಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದೆ ಶಂಕಿಸಲಾಗಿದೆ. ಘಟನೆ ಬಳಿಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಲಬುರಗಿ ವಿ.ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

Tags:
error: Content is protected !!