Mysore
19
clear sky

Social Media

ಗುರುವಾರ, 29 ಜನವರಿ 2026
Light
Dark

ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಮನೆಗೆ ಉಮೇಶ್‌ ಜಾಧವ್‌ ಭೇಟಿ

\

ಪೊಲೀಸ್‌ ಅಧಿಕಾರಿಯಾಗಬೇಕೆಂಬ ರಾಜ್ಯದ ಹಲವಾರು ವಿದ್ಯಾವಂತರ ಕನಸನ್ನು ಭಗ್ನಗೊಳಿಸಿದ್ದ ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಉಮೇಶ್‌ ಜಾಧವ್‌ ಭೇಟಿ ನೀಡಿ ಊಟೋಪಚಾರ ಮಾಡಿದ್ದಾರೆ.

ಈ ಕುರಿತು ಸದ್ಯ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಯುವ ಜನತೆಯ ಭವಿಷ್ಯ ಹಾಳು ಮಾಡಿದವರ ಬಳಿ ಬೆಂಬಲ ಕೇಳುವುದು ಎಷ್ಟು ಸರಿ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಈ ಕುರಿತು ಕಾಂಗ್ರೆಸ್‌ ಸಹ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿ ಬಿಜೆಪಿಯವರೇ ಆತನ ಬ್ಯಾಕ್‌ಬೋನ್‌ ಎಂದು ಬರೆದುಕೊಂಡು ಚಾಟಿ ಬೀಸಿದೆ.

ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಹೀಗಿದೆ: “PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ! ನೀವೇ ಆರ್.ಡಿ ಪಾಟೀಲ್‌ನ ರಕ್ಷಕರು, ನೀವೇ ಆತನ ಬ್ಯಾಕ್ ಬೋನ್ ಎನ್ನುವುದು ಮತ್ತೊಮ್ಮೆ ಬಯಲಾಗಿದೆ. ಬಿಜೆಪಿಯವರೇ, ಕರ್ನಾಟಕ ಕಂಡ ಪ್ರಮುಖ ಹಗರಣದ ರೂವಾರಿಯೊಂದಿಗೆ ಬಿಜೆಪಿಯವರ ಅಕ್ರಮ ಸಂಬಂಧವು ಸಕ್ರಮ ಸಂಬಂಧವಾಗಿ ಬದಲಾಗಿದೆ! ಬಿವೈ ವಿಜಯೇಂದ್ರ ಅವರೇ ಪರೀಕ್ಷಾ ಅಕ್ರಮವಾದಾಗ ಆರ್.ಡಿ ಪಾಟೀಲ್ ತಲೆ ಮರೆಸಿಕೊಳ್ಳಲು ಸಹಕರಿಸಿದ್ದು ಯಾರು? ಕೇಶವಕೃಪವೊ? ಜಗನ್ನಾಥ ಭವನವೋ? ಅಕ್ರಮ ದಂಧೆಕೋರನೊಬ್ಬನೊಂದಿಗೆ ಕುಚಿಕು ಕುಚಿಕು ಸಂಬಂಧ ಹೊಂದಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಿಸಿದ್ದಕ್ಕೆ ಇಂದು ಉತ್ತರ ಸಿಕ್ಕಿದೆಯಲ್ಲವೇ?” ಎಂದು ಬರೆದುಕೊಂಡಿದೆ.

Tags:
error: Content is protected !!