ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಕಲಬುರ್ಗಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ತಾಪಮಾನ ತೀವ್ರ ಏರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಕಲಬುರ್ಗಿ ತಾಲ್ಲೂಕಿನ ಔರಾದ್‌ನಲ್ಲೇ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಚಿಂಚೋಳಿ ಹಾಗೂ ಅಫಜಲಪುರ ತಾಲ್ಲೂಕುಗಳಲ್ಲಿ ತಲಾ 44.03 ಡಿಗ್ರಿ ಸೆಲ್ಸಿಯಸ್, ಆಳಂದ ತಾಲ್ಲೂಕಿನಲ್ಲಿ 44.01 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಉಷ್ಣಾಂಶದ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಆರೋಗ್ಯ ಇಲಾಖೆ ಕೂಡ ಜನತೆಗೆ ಸೂಚನೆ ನೀಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಧ್ಯಾಹ್ನ 12 ಗಂಟೆಯಿಂದ ಸಂಜೆವರೆಗೆ ಅನಾವಶ್ಯಕವಾಗಿ ಹೊರಗೆ ಬರದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…