ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…