ರಾಜ್ಯ

ಮುಸ್ಲಿಂ ಮಹಿಳೆಯರ ವಿರುದ್ಧ ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು

ಭಾನುವಾರ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಕಲ್ಲಡ್ಕ ಪ್ರಭಾಕರ ಭಟ್‌ರ ಈ ಹೇಳಿಕೆಗೆ ಮುಸ್ಲಿಂ ಸಮುದಾಯ ಕಿಡಿಕಾರಿತ್ತು. ಇವರು ಕೋಮು ಗಲಭೆಗೆ ಉತ್ತೇಜನ ನೀಡುವ ಹೇಳಿಕೆ ಹಾಗೂ ಮುಸ್ಲಿಂ ಮಹಿಳೆಯರ ಘನತೆಗೆ ಚ್ಯುತಿ ಬರುವಂತಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಂಧಿಸುವಂತೆ ಒತ್ತಾಯಿಸಲಾಗಿತ್ತು.

ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ನಜ್ಮಾ ನಜೀರ್‌ ಎಂಬುವವರು ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದೂರನ್ನು ದಾಖಲಿಸಿದ್ದರು. ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ ಗಲಭೆ ಹಾಗೂ ಅಶಾಂತಿ ಸೃಷ್ಠಿಸುವ ಹಾಗೆ ಮಾತಾನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಸಹ ಅಣಕಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಮೇರೆ ಕಲ್ಲಡ್ಕ ಪ್ರಭಾಕರ್‌ ಭಟ್‌ ಹಾಗೂ ಇತರರ ವಿರುದ್ಧ ಐಪಿಸಿ ಸೆಕ್ಷನ್‌ 354, 294, 509, 506, 153A, 295, 295A ಹಾಗೂ 298 ಅಡಿಯಲ್ಲಿ ಜಾಮೀನುರಹಿತ ಎಫ್‌ಐಆರ್‌ ದಾಖಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್‌ ಅವರು ಹೈಕೋರ್ಟ್‌ ಮೊರೆ ಹೋಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ಕಲ್ಲಡ್ಕ ಪ್ರಭಾಕರ ಭಟ್‌ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇತ್ತ ಶ್ರೀರಂಗಪಟ್ಟಣ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸಹ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯದ ದೃಷ್ಟಿಯಿಂದ ಜಾಮೀನು ಮಂಜೂರು ಮಾಡಿದರೂ, ತನಿಖೆಗೆ ಪೊಲೀಸರಿಗೆ ಅವಕಾಶ ನೀಡಲಾಗಿದೆ.

andolana

Recent Posts

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

4 mins ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

12 mins ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

16 mins ago

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

7 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

10 hours ago