ರಾಜ್ಯ

ಭೀಮಾ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಭೀಮ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ.

ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

ಇದನ್ನು ಓದಿ : ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು

ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು, ವಿವರಗಳನ್ನು ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆ ನಡೆಸಿದರು.

ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

1 day ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

1 day ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

1 day ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

1 day ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

1 day ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

1 day ago