ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ.
ಕನ್ನಡ ಪರ ಸಂಘಟನೆಗಳೂ ಕಮಲ್ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿರೋಧಿಸುತ್ತಿವೆ.
ಸದ್ಯ ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ಕಮಲ್ ನಟನೆಯ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾದರೆ ರಣರಂಗವೇ ಏರ್ಪಡುತ್ತದೆ. ಜೊತೆಗೆ ಕಮಲ್ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್ ಮಾಡುವ ಬಗ್ಗೆಯೂ ಯೋಚನೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.





