ಮಂಗಳೂರು: ಕಂಬಳಕ್ಕೆ ರಾಜ್ಯದ ಕ್ರೀಡೆ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ, ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ.
ರಾಜ್ಯದ ವಿವಿಧೆಡೆ ಕಂಬಳ ಆಯೋಜಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಂಬಳ ಸಂಸ್ಥೆಯ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿ ಕಂಬಳ ಆಯೋಜನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಸಂಸ್ಥೆಯ ಪ್ರತಿನಿಧಿಗಳು ಮೈಸೂರಿಗೆ ತೆರಳಿ ಪರಿಶೀಲನೆ ನಡೆಸಿದ್ದು, ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ಉದ್ದೇಶವಿದೆ ಎಂದು ಹೇಳಿದರು.
ಶಿವಮೊಗ್ಗ ಹಾಗೂ ಬೆಂಗಳೂರಿನಲ್ಲಿ ಕೂಡ ಕಂಬಳ ಆಯೋಜನೆಗೆ ಅವಕಾಶ ಸಿಗುವ ಭರವಸೆ ಇದೆ. ಉತ್ತರ ಕನ್ನಡದಲ್ಲಿ ಕಂಬಳ ಆಯೋಜಿಸಲು ಸಚಿವ ಮಂಕಾಳ ವೈದ್ಯ ಉತ್ಸಾಹ ತೋರಿಸಿದ್ದಾರೆ. ಅಲ್ಲದೇ ಕಂಬಳದಲ್ಲಿ ತೊಡಗಿಸಿಕೊಂಡವರಿಗೆ ಕಾರ್ಮಿಕ ಕಾರ್ಡ್ ನೀಡುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ಹೇಳಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…
ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…
ಮಂಡ್ಯ: 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್ ಶಾಸಕ ಗಣಿಗ…
ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…
ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…