ರಾಜ್ಯ

ಕನಕಪುರ: ಸ್ಕೂಟರ್‌ಗೆ KSRTC ಬಸ್‌ ಡಿಕ್ಕಿ; ಇಬ್ಬರು ಮಕ್ಕಳ ಸಾವು

ರಾಮನಗರ: ಇಲ್ಲಿನ ಕನಕಪುರ-ರಾಮನಗರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಸ್ಕೂಟರ್‌ಗೆ ಡಿಕ್ಕಿ ಆಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಒಬ್ಬರು ಸ್ಥಿತಿ ಗಂಭೀರವಾಗಿದೆ. ಪ್ರದೀಪ್(‌5) ಮತ್ತು ಭವ್ಯ(3)ಮೃತ ಮಕ್ಕಳು. ಇಬ್ಬರೂ ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಬೈರಪ್ಪ ಅವರ ಮಕ್ಕಳು.

ಭೈರಪ್ಪ ಅವರು ತಮ್ಮ ಮಕ್ಕಳನ್ನು ಅಚ್ಚಲು ಕಾಲೋನಿಯ ಸಂಬಂಧಿ ಗೋವಿಂದ ಅವರ ಮನೆಗೆ ಕಳುಹಿಸಿದ್ದು, ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಗೋವಿಂದ ಅವರು ಬೆಳಿಗ್ಗೆ 9 ಗಂಟೆ ಮಕ್ಕಳು ಹಾಗೂ ಸ್ನೇಹಿತ ಮಧು ಅವರನ್ನು ಕರೆದುಕೊಂಡು ತಮ್ಮ ಸ್ಕೂಟರ್‌ನಲ್ಲಿ ಫಾರಂಗೆ ಹೋಗುವಾಗ ಮಾರ್ಗಮಧ್ಯೆ ಗ್ರಾಮದ ತಿರುವಿನಲ್ಲಿ ವೇಗವಾಗಿ ಬಂದ ಬಸ್‌ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮುಂಭಾಗದಲ್ಲಿ ಕುಳಿತಿದ್ದ ಮಕ್ಕಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮಧು ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಗೋವಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಘಟನೆ ಸಂಬಂಧ ಬಸ್‌ ವಶಪಡಿಸಿಕೊಂಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

32 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago