ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಹಿಂದೆ ಪ್ರತಿಭಟನೆಗಳ ನಂತರ ಪರೀಕ್ಷೆಯನ್ನು ಮುಂದೂಡಲಾಗಿದ್ದರೂ, ಇದೀಗ ಮತ್ತೆ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ.
ಈ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ರೈಲು ಸಂಚಾರ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಲಾಗಿದೆ. ಆಫೀಸ್ ಸೂಪರಿಂಟೆಂಡೆಂಟ್ ಸೇರಿದಂತೆ ಒಟ್ಟು 73 ಹುದ್ದೆಗಳ ಮುಂಬಡ್ತಿಗಾಗಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿದ್ದರೆ ರಾಜ್ಯದಲ್ಲಿ ಒಂದು ರೈಲನ್ನೂ ಓಡಲು ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ರೈಲ್ವೆ ಸಚಿವರು ಮಧ್ಯಪ್ರವೇಶ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ರೈಲ್ವೆ ಪರೀಕ್ಷೆಗಳಲ್ಲಿ ತ್ರಿಭಾಷಾ ಸೂತ್ರದಡಿ ಕನ್ನಡ-ಇಂಗ್ಲಿಷ್-ಹಿಂದಿ ವ್ಯವಸ್ಥೆಯನ್ನು ಅಳವಡಿಸಲೇಬೇಕು. ಅಧಿಕಾರಿಗಳು ತಮ ಸುತ್ತೋಲೆಯಲ್ಲಿನ ದೋಷ ಸರಿಪಡಿಸಿ ಕನ್ನಡದಲ್ಲಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ರೈಲ್ವೆ ಇಲಾಖೆ ತನ್ನ ಧೋರಣೆ ಬದಲಿಸಿಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಸಿವೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…