ಬೆಂಗಳೂರು: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಆಯೋಜಿಸಲಾಗುವುದು. ಹಾಗೂ ಕಾರ್ಯಕ್ರಮದ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು, ಮಂಡ್ಯದಲ್ಲಿ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಿದ್ದು ಎಲ್ಲವನ್ನು ಬಗೆಹರಿಸಿ ಸಮ್ಮೇಳನ ನಡೆಸಲಾಗುವುದು ಎಂದರು.
ವಿಶ್ವ ಸಮ್ಮೇಳನ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಸಮ್ಮೇಳನ ನಡೆಸುವ ಬಗ್ಗೆ ನಮಗೂ ಕೂಡಾ ಹೆಚ್ಚಿನ ಆಸಕ್ತಿಯಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಬೆಂಗಳೂರಿನ ವಿಧಾನಸೌಧ ಸಮ್ಮೇಳನದ ಸಭಾಂಗಣದಲ್ಲಿ ಶುಕ್ರವಾರ 14 ಅಕಾಡೆಮಿ ಮತ್ತು 4 ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಮತ್ತು ಸದಸ್ಯರ ಜತೆಯಲ್ಲಿ ಸಮಾಲೋಚನೆ ನಡೆಸಿದರು. ಬಳಿಕ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆ ಬಗ್ಗೆ ಪ್ರಾಧಿಕಾರ ಮತ್ತು ಅಕಾಡೆಮಿಗಳು ರಾಜೀಯಾಗದೇ ಕೆಲಸ ಮಾಡಬೇಕು ಎಂಬುದು ನಮ್ಮ ಆಶಯ. ಈ ಬಗ್ಗೆ ನೂತನಾಗಿ ನೇಮಕಗೊಂಡವರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…