ರಾಜ್ಯ

ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಸರಾಯಿತು ಕರ್ನಾಟಕ ಉಸಿರಾಯಿತುಕನ್ನಡ, ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ತುಂಬಿದ ಸಂದರ್ಭದಲ್ಲಿ ಕನ್ನಡಿಗರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದರು.

ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲಿ ಚೂಡಾಮಣಿ ಆಗು, ಕನ್ನಡ ಜ್ಯೋತಿ ಬೆಳಗು ಜಗಕೆಲ್ಲ ಎಂಬ ಕವಿವಾಣಿಯನ್ನು ಸ್ಮರಿಸಿಕೊಂಡ ಅವರು, ಕನ್ನಡ.. ಕನ್ನಡಿಗ..ಕರ್ನಾಟಕ… ಈ ಮೂರಕ್ಕೂ ನವೆಂಬರ್ 1 ಕ್ಕೂ ಬಿಡಿಸಲಾರದ ನಂಟು. ಆದರೆ ಕನ್ನಡದ ಅಭಿಮಾನ ಬರೀ ನವೆಂಬರ್ 1 ಕ್ಕೆ ಸೀಮಿತ ಆಗದಿರಲಿ. ಕನ್ನಡ ಹೃದಯದ ಭಾಷೆಯಾಗಲಿ, ಕನ್ನಡ ಮನಸ್ಸಿನ ಭಾಷೆಯಾಗಲಿ ಎಂದರು.

ಅನೇಕ ಹಿರಿಯರು ಕನ್ನಡದ ಬಗ್ಗೆ ವಿವಿಧ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅಂಕುಶದಿಂದ ಚುಚ್ಚಿದರೂ ನಾನು ಹುಟ್ಟಿದ ಊರನ್ನು ಮರೆಯುವುದಿಲ್ಲ ಎಂದು ಪಂಪ ಹೇಳಿದ್ದಾರೆ. ಕುರಾನಿನಲ್ಲಿ ಹೇಳುತ್ತಾರೆ, ಸ್ವರ್ಗವು ತಂದೆ-ತಾಯಿಯ ಪಾದದ ಕೆಳಗೆ ಇದೆ ಎಂದು. ಅಂದರೆ ತಂದೆ-ತಾಯಿ ಸ್ಪರ್ಶಿಸಿದ ನೆಲವೇ ಸ್ವರ್ಗ ಎಂದು. ನಮಗೆ ಆ ಸ್ವರ್ಗ ಕರ್ನಾಟಕ. ತುಂಗಾ, ಭದ್ರಾ, ಕೃಷ್ಣ, ಕಾವೇರಿ ಹರಿಯುವ ಈ ತಾಯಿ ನೆಲವೇ ನಮಗೆ ಸ್ವರ್ಗ ಎಂದರು.

ನಾವು ಕೋಮು ದ್ವೇಷಕ್ಕೆ ಸಿಲುಕದೆ, ಕರ್ನಾಟಕದ ಮನಸ್ಸುಗಳನ್ನು ಒಡೆಯದೇ ಯಾವ ಹೊರಗಿನ ಶಕ್ತಿಗೂ ಹೆದರದೆ ಒಂದಾಗಿ ಬದುಕುತ್ತೇವೆ. ಸರ್ವಜನಾಂಗದ ಶಾಂತಿಯ ತೋಟ ಮರಳಿ ನಿರ್ಮಿಸುತ್ತೇವೆ ಎಂಬ ದೀಕ್ಷೆ ತೊಡೋಣ. ಬಹಳಷ್ಟು ಮಂದಿಯ ತ್ಯಾಗ ಮತ್ತು ಬಲಿದಾನದ ಫಲವೇ ಅಖಂಡ ಕರ್ನಾಟಕ. ಇದನ್ನು ಜೋಪಾನವಾಗಿ ಕಾಪಾಡಬೇಕು ಎಂದರು.

ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕರ್ನಾಟಕ ನೆಲ, ಜಲ, ಭಾಷೆಯಿಂದ ಸಂವೃದ್ಧಗೊಂಡಿದೆ. ವ್ಯಾಪಕ ಉದ್ಯೋಗ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಳಿದ ಅಗತ್ಯ ಇರುವ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಲಾಗುವುದು. 8311 ಹೊಸ ಕೊಠಡಿಗಳನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ. 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 2024-25ನೇ ಸಾಲಿನಲ್ಲಿ 600 ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದರು.

ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಭಾರಿ ಪರೀಕ್ಷೆ ನಡೆಸಿ, ಸಾಧನೆ ಉತ್ತಮ ಪಡಿಸಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರವಾಗಿ ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ. ಈ ವರ್ಷದಿಂದ 9 ಮತ್ತು 10ನೇ ತರಗತಿಯ ಮಕ್ಕಳಿಗೂ ಪೂರಕ ಆಹಾರ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಘಗಳ ಸಹಯೋಗದಲ್ಲಿ ಹಾಲಿನೊಂದಿಗೆ ಹೆಚ್ಚಿನ ಪೆÇ?ಷಕಾಂಶಗಳನ್ನು ನೀಡಲು ಈ ತಿಂಗಳಿನಿಂದಲೇ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದರು.

ಶಾಸಕ ರಿಜ್ಞಾನ್ ಅರ್ಷದ್ ಮಾತನಾಡಿ, ಕನ್ನಡ ನಾಡಿಗೆ ಅಧಿಕೃತವಾದ ಧ್ವಜ ಬೇಕಿದೆ. ಆರು ವರ್ಷದ ಹಿಂದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಡಿರುವ ಶಿಫಾರಸ್ಸನ್ನು ಆಧರಿಸಿ ನಾಡಿನ ಧ್ವಜಕ್ಕೆ ಮಾನ್ಯತೆ ದೊರೆಯಬೇಕು ಎಂದು ಒತ್ತಾಯ ಮಾಡಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago