ರಾಜ್ಯ

ನೆರೆ ರಾಜ್ಯಗಳ ವಿ.ವಿಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ : 25 ಸಾ.ರೂ. ವಿದ್ಯಾರ್ಥಿ ವೇತನ

ಬೆಂಗಳೂರು : ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು ೧೦೨ ವಿದ್ಯಾರ್ಥಿಗಳಿಗೆ ತಲಾ ೨೫ ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಅನುದಾನ ಕೊರತೆಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಿದ್ದು, ಈ ಬಾರಿಯ ಕೊರತೆ ಅನುದಾನದ ನಡುವೆಯೂ ಈ ವಿಶ್ವವಿದ್ಯಾಲಯಗಳಲ್ಲಿ ೨೦೨೪-೨೫ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿದ್ಯಾರ್ಥಿವೇತನ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ೨೧ ವಿದ್ಯಾರ್ಥಿಗಳು, ಕಾಸರಗೋಡಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ೨೭ ವಿದ್ಯಾರ್ಥಿಗಳು, ಮಹಾರಾಷ್ಟ್ರದ ಸೊಲ್ಲಾಪುರದ ಪುಣ್ಯಶ್ಲೋಕ ಅಹಿಲ್ಯಾದೇವಿ ಹೊಳ್ಕರ ವಿಶ್ವವಿದ್ಯಾಲಯದ ೨೫ ವಿದ್ಯಾರ್ಥಿಗಳು, ಸೊಲ್ಲಾಪುರದ ಸಿಬಿ ಖೇಡಗಿ ಬಸವೇಶ್ವರ ಮಹಾವಿದ್ಯಾಲಯದ ೨೩ ವಿದ್ಯಾರ್ಥಿಗಳು, ಮುಂಬೈ ವಿಶ್ವವಿದ್ಯಾಲಯದ ಇಬ್ಬರು, ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಮೂರು ವಿದ್ಯಾರ್ಥಿಗಳು ಹಾಗೂ ಚನ್ನೈನ ಮದ್ರಾಸು ವಿಶ್ವವಿದ್ಯಾಲಯದ ಒಬ್ಬ ವಿದ್ಯಾರ್ಥಿಗೆ ಒಟ್ಟಾರೆ ೧೦೨ ವಿದ್ಯಾರ್ಥಿಗಳಿಗೆ ತಲಾ ರೂ. ೨೫ ಸಾವಿರದಂತೆ ಒಟ್ಟು ರೂ. ಇಪ್ಪತ್ತೈದು ಲಕ್ಷ ಐವತ್ತು ಸಾವಿರ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದಿರುವ ಬಿಳಿಮಲೆ, ಇದೇ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೂಡಲೇ ರಾಜ್ಯ ಸರ್ಕಾರವು ಹೊರ ನಾಡಿನ ಎಂ.ಎ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾರ್ಥಿವೇತನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಗೆ ಈ ವಿಶ್ವವಿದ್ಯಾಲಯಗಳ ಕನ್ನಡ ವಿಭಾಗಗಳನ್ನು ಸಬಲೀಕರಣಗೊಳಿಸಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

3 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

3 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

3 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

3 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

3 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

3 hours ago