ರಾಜ್ಯ

ಕನ್ನಡ ನಾಮಫಲಕ ಕಡ್ಡಾಯ : ಸಮರ್ಪಕ ಅನುಷ್ಠಾನಕ್ಕೆ ಸಚಿವ ಶಿವರಾಜ್‌ ತಂಗಡಗಿ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ‌ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ .ಎಸ್.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಸಚಿವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ,‌ ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಗಳ ಜತೆ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವನ್ನು ಸಮರ್ಪಕ ಅನುಷ್ಠಾನ ಆಗಲೇ ಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಆಗಿಲ್ಲ.

ಪ್ರಮುಖವಾಗಿ ಸ್ಥಳೀಯ ಅನುಷ್ಠಾನ ಆಡಳಿತದೊಂದಿಗೆ ಪೊಲೀಸರನ್ನೊಳಗೊಂಡ ಟಾಸ್ಕ್ ಫೋರ್ಸ್‌ ರಚನೆ, ಬಿಬಿಎಂಪಿ ವಲಯಗಳಲ್ಲಿ ಜಾಗೃತ ವಾಹನಗಳ ಬಳಕೆ, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮ ಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ವಿಧೇಯಕ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕರಾದ ಡಾ.ಕೆ.ಧರಣಿದೇವಿ ಮಾಲಗತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

3 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

4 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

4 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

4 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

5 hours ago