ಬೆಂಗಳೂರು: ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಪ್ರಕಾಶಕಿಯಾಗಿದ್ದ ಆಶಾ ರಘು ಅವರು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇವರ ಪತಿ ಕೆ.ಸಿ.ರಘು ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ನಿಧನರಾಗಿದ್ದರು. ಅಂದಿನಿಂದ ಆಶಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಒಂದೂವರೆ ವರ್ಷದಿಂದ ಚಿಕಿತ್ಸೆಯ ಜೊತೆಗೆ ಆಪ್ತ ಸಮಾಲೋಚಕರಿಂದ ಕೌನ್ಸಿಲಿಂಗ್ ಮಾಡಿಸಲಾಗುತ್ತಿತ್ತು. ಹೀಗಿದ್ದೂ ಕಳೆದ ಕೆಲವು ತಿಂಗಳಿನಿಂದ ಬಹಳ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.
ಹೀಗಿರುವಾಗಲೇ ಶುಕ್ರವಾರ ರಾತ್ರಿ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





