ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‍ನಲ್ಲಿ ಸ್ಪಷ್ಟಪಡಿಸಿದರು.
ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಉಮಾಶ್ರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಡಿಮೆ ವಿದ್ಯಾರ್ಥಿಗಳ ಸಂಖ್ಯೆಯಿರುವ ಶಾಲೆಗಳನ್ನು ಸರ್ಕಾರ ಪಕ್ಕದ ಶಾಲೆಗಳಿಗೆ ವಿಲೀನಗೊಳಿಸುತ್ತದೆ ಇಲ್ಲವೇ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತದೆ. ಇದಕ್ಕೆ ಮಾಧ್ಯಮಗಳು ಕೂಡ ಪುಷ್ಟಿ ನೀಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಸರ್ಕಾರಿ ಶಾಲೆಗಳನ್ನು ಎಲ್ಲಿಯೂ ಮುಚ್ಚುತ್ತೇವೆ ಎಂದು ಇಲ್ಲವೇ ವಿಲೀನ ಮಾಡುತ್ತೇವೆ ಎಂದು ಹೇಳಿಲ್ಲ. ಅಗತ್ಯಬಿದ್ದರೆ ಸರ್ಕಾರಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತೇವೆ. ಈ ಬಗ್ಗೆ ಎದ್ದಿರುವ ಗೊಂದಲಗಳು ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದರು.
ಕೆಲವು ಕಡೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದರೂ ಆ ಶಾಲೆಗಳಿಗೆ ನಾವು ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ ಕೊಡುತ್ತಿದ್ದೇವೆ. ಇದನ್ನು ಎಲ್ಲಿಯಾದರೂ ನಿಲ್ಲಿಸಿದೆಯೇ? ಎಂದು ವಿರೋಧಪಕ್ಷದ ಸದಸ್ಯರನ್ನು ಪ್ರಶ್ನೆ ಮಾಡಿದರು.
ಇದನ್ನು ಓದಿ: ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್
ನಮ ರಕ್ತದ ಕಣಕಣದಲ್ಲೂ ಕನ್ನಡ ಇದೆ. ಕನ್ನಡದ ಬಗ್ಗೆ ನಮಗೆ ಬದ್ಧತೆ ಇದೆ. ಕಾಳಜಿಯೂ ಇದೆ. ಹಿಂದಿನ ಸರ್ಕಾರಗಳು ಸರ್ಕಾರಿ ಶಾಲೆಗಳನ್ನು ಯಾವ ದುಸ್ಥಿತಿಗೆ ತಂದಿದ್ದವು ಎಂದು ಹೇಳಲು ಹೋದರೆ ಬೇರೆ ಕತೆಯಾಗುತ್ತದೆ. ಅನುದಾನಿತ ಶಾಲೆಗಳಲ್ಲಿ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಕ ಮಾಡಿದ ಮೊಟ್ಟ ಮೊದಲ ಸರ್ಕಾರ ಎಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದಾಗ ಆಡಳಿತ ಪಕ್ಷದ ಸದಸ್ಯರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು.
ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಸರ್ಕಾರಿ ಶಾಲೆಗಳನ್ನು ಎಷ್ಟು ಮುಚ್ಚಿದೆ ಎಂದು ನಾನು ಸದನಕ್ಕೆ ಹೇಳಬೇಕಿದೆ. ಇಡೀ ದೇಶದಲ್ಲೆ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳು, ಗುಣಮಟ್ಟದ ಶಿಕ್ಷಣ, ಸೈಕಲ್ ವಿತರಣೆ ಸೇರಿದಂತೆ ಹಲವಾರು ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ಸರ್ಕಾರಿ ಶಾಲೆಯನ್ನು ಎಲ್ಲಾದರೂ ಮುಚ್ಚಿದ್ದರೆ ದಾಖಲೆ ಸಮೇತ ಕೊಡಿ ಎಂದು ಮಧು ಬಂಗಾರಪ್ಪ ಸವಾಲು ಹಾಕಿದರು.
ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವುದಕ್ಕಾಗಿಯೇ ರಾಜ್ಯದ ಪ್ರತಿಯೊಂದು ತಾಲ್ಲೂಕಿನ ಹೋಬಳಿಯಲ್ಲಿ ಕೆಪಿಎಸ್ ತೆರೆಯಲಾಗಿದೆ. ನಾನು ಹೇಳದೇ ಇರುವ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಘೋಷಣೆ ಮಾಡಿದ್ದು 500 ಶಾಲೆ. ಈಗ 900 ಶಾಲೆಗಳನ್ನು ಪ್ರಾರಂಭಿಸಿದ್ದೇವೆ. ಇದು ನಮ ಸರ್ಕಾರದ ಬದ್ಧತೆ ಅಲ್ಲವೇ? ಎಂದು ಹೇಳಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…