ರಾಜ್ಯ

ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪರಮೇಶ್ವರ್‌

ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್‌ ಭರವಸೆ ನೀಡಿದ್ದಾರೆ.

ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತ್ಯಾಮಗೊಂಡ್ಲುಗೆ ಭೇಟಿ ನೀಡಿ, ತಂದೆ ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ನೆಲಮಂಗಲ ಕ್ಷೇತ್ರದ ಮಾಜಿ ಶಾಸಕ ಡಾ.ಶ್ರೀನಿವಾಸ ಮೂರ್ತಿ ಚಂದನ್ ಕುಮಾರ್ ಮನೆಗೆ ಭೇಟಿ ನೀಡಿದ್ದರು. ಅಲ್ಲಿಂದಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಆ ವೇಳೆ ಚಂದನ್ ಅವರ ತಂದೆ ತಾಯಿ ಜೊತೆ ಮಾತನಾಡಿದ ಕುಮಾರಸ್ವಾಮಿಯವರು ಭಾರೀ ಅನ್ಯಾಯವಾಗಿ ಹೋಗಿದೆ ಎಂದು ವಿಷಾದಿಸಿದ್ದಾರೆ.

ತಾವು ರಾಯಭಾರ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಪಾರ್ಥಿವ ಶರೀರವನ್ನು ಆದಷ್ಟು ಶೀಘ್ರವಾಗಿ ತರಲು ಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ಚಂದನ್ ಅವರ ತಂದೆ, ತಮ್ಮ ಪುತ್ರನನ್ನು ತಾಯ್ನಾಡಿನಲ್ಲೇ ಸಂಸ್ಕಾರ ಮಾಡಬೇಕು. ಮೃತದೇಹ ತರಲು ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ನನ್ನ ಮಗನಿಗೆ ಕೆನಡಾಗೆ ಹೋಗುವುದು ಬೇಡ. ಇಲ್ಲೆ? ಇರು ಎಂದು ಒತ್ತಾಯ ಮಾಡಿದ್ದೆ. ಮದುವೆಯಾಗುವಂತೆಯೂ ಹೇಳಿದ್ದೆ. ವಿದೇಶಕ್ಕೆ ಹೋಗುವ ಅವಕಾಶ ಸಿಕ್ಕಾಗ ಬಿಡಬಾರದು ಎಂದು ಹೇಳಿ ನನ್ನನ್ನೇ ಸಮಾಧಾನ ಮಾಡಿದ್ದ ಎಂದು ತಂದೆ ಕಣ್ಣೆರು ಹಾಕಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಭೇಟಿಯ ವೇಳೆ ತಾಯಿ ಶೈಲಜಾ, ತಮ್ಮ ಪುತ್ರನ ಪ್ರತಿಭೆಯ ಬಗ್ಗೆ ಗುಣಗಾನ ಮಾಡಿ ದುಃಖ ತೋಡಿಕೊಂಡಿದ್ದಾರೆ. ಅರೆಕಾಲಿಕ ಉದ್ಯೋಗ ಮಾಡಿಕೊಂಡು ಎಂಜಿನಿಯರಿಂಗ್ ಓದಿದ್ದ ಚಂದನ್, ಕ್ರೀಡೆ, ಓದು ಎಲ್ಲದರಲ್ಲೂ ಮುಂದಿದ್ದ. ಸ್ವಂತ ಪ್ರತಿಭೆಯ ಮೇಲೆ ಕೆನಡಾದಲ್ಲಿ ಉದ್ಯೋಗ ಗಿಟ್ಟಿಸಿದ್ದ. ನಮಗೆ ಯಾವ ಸಂದರ್ಭದಲ್ಲಿಯೂ ಒಂದಿಷ್ಟೂ ಕಷ್ಟ ಕೊಟ್ಟಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ನಾವು ಆತನ ಮೇಲೆ ಜೀವವನ್ನೇ ಇಟ್ಟುಕೊಂಡಿದ್ದೇವು. ಅವನಿಲ್ಲದ ಜೀವನ ನಮಗೆ ಕಲ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾವು ಇನ್ನೇಕೆ ಜೀವದಿಂದ ಇರಬೇಕು ಎಂಬ ನಿರಾಸೆ ಕಾಡುತ್ತಿದೆ ಎಂದಿದ್ದಾರೆ.

ತಮ್ಮ ಪುತ್ರನ ಪ್ರತಿಭೆ ಹಾಗೂ ಒಳ್ಳೆಯತನದ ಬಗ್ಗೆ ಹೊಗಳುವುದು ಇಷ್ಟವಾಗುತ್ತಿರಲಿಲ್ಲ. ನಾನು ಹೆಮೆಯಿಂದ ಯಾರ ಬಳಿಯಾದರೂ ಹೇಳಿಕೊಂಡರೆ, ಆ ರೀತಿ ಹೇಳಬೇಡ ಎಂದು ನನ್ನನ್ನೆ ಬಯ್ಯುತ್ತಿದ್ದ. ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ. ಕೆನಾಡಾಗೆ ಯಾರೇ ಬರುವುದಿದ್ದರೂ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ಎಂದು ಗೃಹ ಸಚಿವರಿಗೆ ವಿವರಿಸಿದ್ದಾರೆ.

ಕೆನಡಾದಲ್ಲಿ ಕನ್ನಡಾಭಿಮಾನ ಬಿತ್ತುವಲ್ಲಿ ಚಂದನ್ ಪಾತ್ರ ಪ್ರಮುಖವಾಗಿತ್ತು. ಕನ್ನಡ ಚಿತ್ರಗಳನ್ನು ಅಲ್ಲಿ ಬಿಡುಗಡೆ ಮಾಡಿಸಲು ಯತ್ನಿಸುತ್ತಿದ್ದರು ಎಂದು ಅವರ ಸ್ನೇಹಿತರು ಹೇಳಿದ್ದಾರೆ. ಸಚಿವ ಪರಮೇಶ್ವರ್, ಇದು ಆಗಬಾರದಿತ್ತು. ಧೈರ್ಯ ತಂದುಕೊಳ್ಳಿ. ನಾವು ನಿಮ್ಮ ಜೊತೆಗಿದ್ದೇವೆ ಎಂದು ಪೋಷಕರಿಗೆ ಧೈರ್ಯ ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

3 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

6 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

7 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

7 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

7 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

7 hours ago