ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.
ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು
ರಾಮಂತಳಿಯಲ್ಲಿರುವ ಅವರ ನಿವಾಸದಲ್ಲಿ 38 ವರ್ಷದ ವ್ಯಕ್ತಿ, ಅವರ 60 ವರ್ಷದ ತಾಯಿ ಮತ್ತು ಐದು ಮತ್ತು ಎರಡು ವರ್ಷದ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ವ್ಯಕ್ತಿ ಮತ್ತು ಅವರ ತಾಯಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕ್ಕ ಮಕ್ಕಳು ನೆಲದ ಮೇಲೆ ಪತ್ತೆಯಾಗಿದ್ದಾರೆ. ಪಯ್ಯನೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.





