ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡಾ ಆಚರಣೆಯಾದ ಕಂಬಳ ಸ್ಪರ್ಧೆ ಆಯೋಜನೆಯಾಗಿದೆ. ಈ ಕಂಬಳದಲ್ಲಿ 200 ಕೋಣಗಳು ಭಾಗಿಯಾಗಿದ್ದು, ವಿವಿಧ ಕಂಬಳ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸುತ್ತಿವೆ. ಇನ್ನು ಇದೇ ಕಂಬಳದ ಕನೆಹಲಗೆ ವಿಭಾಗದಲ್ಲಿ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳು ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡಿವೆ.
ಹೌದು, ಕಾಂತಾರ ಚಿತ್ರದಲ್ಲಿ ನಟ ರಿಷಬ್ ಶೆಟ್ಟಿ ನಿರ್ವಹಿಸಿದ್ದ ಕಾಡುಬೆಟ್ಟು ಶಿವ ಪಾತ್ರದ ಇಂಟ್ರೊಡಕ್ಷನ್ ದೃಶ್ಯ ಯಾರಿಗೆ ತಾನೇ ನೆನಪಿಲ್ಲ ಹೇಳಿ. ಈ ದೃಶ್ಯದಲ್ಲಿ ರಿಷಬ್ ಶೆಟ್ಟಿ ಎರಡು ಕೋಣಗಳನ್ನು ಹಿಡಿದು ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸಿ ಮೆಡಲ್ ಗೆಲ್ಲುತ್ತಾರೆ. ಕೊನೆಗೆ ಗೆದ್ದ ಪದಕವನ್ನು ಕೋಣಗಳಿಗೆ ಅರ್ಪಿಸುತ್ತಾರೆ.
ಹೀಗೆ ರೀಲ್‌ನಲ್ಲಿ ಓಡಿ ಪದಕ ಗೆದ್ದ ಅಪ್ಪು ಹಾಗೂ ಕಿಟ್ಟಿ ಎಂಬ ಈ ಎರಡು ಕೋಣಗಳು ಇದೀಗ ರಿಯಲ್‌ನಲ್ಲಿಯೂ ಪದಕವನ್ನು ಗೆದ್ದಿವೆ. ಇನ್ನು ಉಡುಪಿಯ ಬೈಂದೂರಿನ ಚೈತ್ರ ಪರಮೇಶ್ವರ್ ಭಟ್ ಎಂಬುವವರ ಒಡೆತನದ ಕೋಣಗಳು ಇವಾಗಿದ್ದು, ಚಿತ್ರದಲ್ಲಿ ಕಂಡಿದ್ದ ಈ ಕೋಣಗಳನ್ನು ನಿಜವಾಗಿಯೂ ನೋಡಿದ ಬೆಂಗಳೂರು ಜನತೆ ಆ ಕೋಣಗಳ ಫೋಟೊಗಳನ್ನು ಮೊಬೈಲ್‌ನಲ್ಲಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…