ರಾಜ್ಯ

ಕಾಂತಾರ ಮಿಮಿಕ್ರಿ ವಿವಾದ: ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿಗೆ ಕೋರ್ಟ್‌ ಸೂಚನೆ

ಬೆಂಗಳೂರು: ಕಾಂತಾರ ಚಾಪ್ಟರ್-‌1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು ನಿರ್ದೇಶಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಅರ್ಜಿ ವಿಲೇವಾರಿ ಮಾಡಿದೆ.

ಪ್ರತಿಯೊಂದು ಪದಕ್ಕೂ ತನ್ನದೇ ಆದ ತೂಕವಿದೆ. ಪದಗಳು ಪ್ರಭಾವ ಮತ್ತು ಪರಿಣಾಮಗಳನ್ನು ಉಂಟು ಮಾಡುತ್ತವೆ. ಇದೇ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಲಾಗುವುದು ಎಂದು ರಣವೀರ್‌ ಅಫಿಡವಿಟ್‌ನಲ್ಲಿ ಹೇಳಿದ್ದಾರೆ. ಸಮಯ ಬಂದಾಗ ಎಂದು ಹೇಳಿದ್ದಾರೆ. ಅದು 30, 40 ದಿನವಾಗಬಹುದು. ಒಂದು ವರ್ಷ.. ಹತ್ತು ವರ್ಷವಾಗಬಹುದು ಎಂದು ಶಂಕೆ ವ್ಯಕ್ತಪಡಿಸಿದರು. ನಾಲ್ಕು ವಾರಗಳಲ್ಲಿ ರಣವೀರ್‌ ದೇವಸ್ಥಾನಕ್ಕೆ ಭೇಟಿ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗುವುದು ಎಂದು ಹೇಳಿದರು.

ಇದನ್ನು ಇತರೆ ಸೆಲೆಬ್ರಿಟಿಗಳು ಲಘುವಾಗಿ ಪರಿಗಣಿಸಬಾರದು. ಕಠಿಣ ಎಚ್ಚರಿಕೆಯನ್ನು ಈ ನ್ಯಾಯಾಲಯ ನೀಡಬೇಕು ಎಂದು ಮಲೆಯಾಳ್‌ ಕೇಳಿದರು. ಇದಕ್ಕೆ ಪೀಠವು ಖಂಡಿತವಾಗಿಯೂ ಎಚ್ಚರಿಸಲಾಗುವುದು. ಕಾನೂನಿನ ಅನ್ವಯ ಉತ್ತರಿಸಬೇಕು ಎಂದಾದರೆ ಎಚ್ಚರಿಸುವ ಪರಿಸ್ಥಿತಿ ನಿರ್ಮಾಣವೇ ಆಗಲ್ಲ ಎಂದಿತು.

ಒಟ್ಟಾರೆಯಾಗಿ ಒಂದು ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿ ನೀಡಬೇಕು ಎಂದು ಸೂಚನೆ ನೀಡಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago