ರಾಜ್ಯ

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಪತ್ರ ಬರೆದಿರುವ ನಾರಾಯಣಗೌಡ ಅವರು, ಭಾಷೆ ವಿಚಾರದಲ್ಲಿ ನಿಮ್ಮ ಅಧಿಕ ಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ ಎಂದು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರೇ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್‌ ನೀಡುವ ಸರ್ಕಾರದ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕ ಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ.

ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ. ಸಾಂವಿಧಾನಿಕ ಹೊಣೆಗಾರಿಕೆಯಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

18 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago