ಬೆಂಗಳೂರು : ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಮೂರನೇ ದಿನವೂ ಸಹ ಸದನ ವಾಲ್ಮೀಕಿ ಹಗರಣ ಚರ್ಚೆಯಲ್ಲೆ ಕಳೆದು ಹೋಗಿತ್ತು. ಅಲ್ಲದೆ ರೈತನಿಗೆ ಅಪಮಾನ ಮಾಡಿದ ಜಿಟಿ ಮಾಲ್ ವಿಚಾರ ಮುನ್ನೆಲೆಗೆ ಬಂದು ಸಾಕಷ್ಟು ಚರ್ಚೆಗಳು ನಡೆಯಿತು. ಹೀಗಾಗಿ ನಾಲ್ಕನೇ ದಿನವಾದ ಇಂದಾದರೂ ರಾಜ್ಯದಲ್ಲಿ ಉದ್ಭವಿಸಿರುವ ಸಮಸ್ಯೆಗಳು ಚರ್ಚೆಗೆ ಬರಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಸದನ ಆರಂಭದಲ್ಲೆ ವಾಲ್ಮೀಕಿ ಹಗರಣದ ವಿರುದ್ಧ ವಿರೋಧಪಕ್ಷಗಳು ಪ್ರತಿಭಟನೆ ನಡೆಸಲು ಮುಂದಾದರು.
ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ವಿರುದ್ಧ ಇಂದು ಸಹ ಬಿಜೆಪಿ ಜೆಡಿಎಸ್ ಸದನ ಬಾವಿಗಿಳಿದು, ಸಿಎಂ ಸಿದ್ದರಾಮಯ್ಯ ಉತ್ತರಕೊಡಬೇಕು. ವಾಲ್ಮೀಕಿ ಹಗರಣದಲ್ಲಿ ದುಡ್ಡು ತಿಂದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಲು ಮುಂದಾದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಶುರುವಾಗಿ ಕೊನೆಗೆ ಸದನದಲ್ಲಿ ಗದ್ದಲ ಶುರುವಾಯಿತು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಸದನವನ್ನು ೧೦ ನಿಮಿಷಗಳ ಕಾಲ ಮುಂದೂಡಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…