ಬೆಂಗಳೂರು: ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ್ ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ಬಳಿಕ ಮಾತನಾಡಿದ ಅವರು, ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ. ಮಾರ್ಚ್22 ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್ ಮಾಡಲಾಗುತ್ತದೆ. ಬೆಳಿಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದರು.
ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದರೆ, ನಮ್ಮ ಕಣ್ಣಿಗೆ ಇದು ಬೆಟ್ಟ. ಮಾರ್ಚ್22ರ ಪ್ರತಿಭಟನೆ ದಿನ ಯಾರು ಮೆಟ್ರೋ ಹತ್ತಬಾರದು. ಅಂದು ಬಸ್ ಓಡಿಸಬಾರದೆಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತನಾಡಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಎಂದರು.
ಇನ್ನು ಬಂದ್‌ಗೆ ಸಾರಿಗೆ ನೌಕರರು ಸಹ ಬೆಂಬಲಿಸಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್‌ಗೆ KSRTC, BMTC ನೌಕರರ ಸಂಘದಿಂದ ಕೂಡ ಬೆಂಬಲ ಇದೆ. ಸಾರಿಗೆ ನೌಕರನ ಮೇಲಿನ ಹಲ್ಲೆ ಖಂಡನೀಯ. ಕರ್ನಾಟಕ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…