Mysore
25
clear sky

Social Media

ಗುರುವಾರ, 02 ಏಪ್ರಿಲ 2026
Light
Dark

ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ವರುಣನ ಆರ್ಭಟ: 6 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

heavy rain

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಆರು ಜಿಲ್ಲೆಗಳಲ್ಲಿ ಇಂದಿನಿಂದ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಇಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಧಾರವಾಡ, ಬೆಳಗಾವಿ, ಹಾವೇರಿ, ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರಿಸಿ ಬೊಬ್ಬಿರಿಯಲಿದ್ದು, ಹಳದಿ ಅಲರ್ಟ್‌ ಘೋಷಣೆ ಘೋಷಣೆ ಮಾಡಲಾಗಿದೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜೂನ್.‌17ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!