heavy rain
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಆರು ಜಿಲ್ಲೆಗಳಲ್ಲಿ ಇಂದಿನಿಂದ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಧಾರವಾಡ, ಬೆಳಗಾವಿ, ಹಾವೇರಿ, ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರಿಸಿ ಬೊಬ್ಬಿರಿಯಲಿದ್ದು, ಹಳದಿ ಅಲರ್ಟ್ ಘೋಷಣೆ ಘೋಷಣೆ ಮಾಡಲಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೂನ್.17ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…