ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.
ವಿಧಾನಸಭೆಯಲ್ಲಿಂದು ಸಚಿವ ಎಚ್.ಕೆ.ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಭಾತ್ಯಾಗ ಮಾಡಿತು.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಸಂವಿಧಾನದ ಮೂಲಭೂತ ತತ್ವಗಳನ್ನು ಉಲ್ಲಂಘಿಸುವ ನಿಬಂಧನೆಗಳನ್ನು ಒಳಗೊಂಡಿರುವ ವಕ್ಫ್ ಮಸೂದೆ, 2024ನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಬೇಕು ಎಂದು ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ ಎಂದು ಹೇಳಿದರು.
ಬಿಜೆಪಿ ಶಾಸಕರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದು ಮಿತಿ ಮೀರಿದ ಓಲೈಕೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.





