ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ.
ವಾಲ್ಮೀಕಿ, ಮುಡಾ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಣ ಬಳಸಿಕೊಂಡಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಸದನ ಆರಂಭಕ್ಕೂ ಮುನ್ನ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ಬಿಜೆಪಿ ನಾಯಕರು, ಸಿಎಂ ಸಿದ್ದರಾಮಯ್ಯ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ನಡೆಯುತ್ತಿದ್ದ ವೇಳೆಯೇ ಸಿಎಂ ಸಿದ್ದರಾಮಯ್ಯ ಕಾರು ಆಗಮಿಸಿತ್ತು. ಪರಿಣಾಮ ಸಿಎಂ ಸಿದ್ದರಾಮಯ್ಯರಿಗೂ ಪ್ರತಿಭಟನೆಯ ಬಿಸಿ ತಟ್ಟಿತು.
ಇನ್ನೂ ಆಂಧ್ರಪ್ರದೇಶದತ್ತ ತೆರಳಿದ್ದ ಕೈ ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿ ಎಲ್ಲರಿಗೂ ಆಶ್ಚರ್ಯ ಮೂಡಿಸಿದರು.
ಸದನದ ಹೊರಗೆ ದೊಡ್ಡ ಪ್ರತಿಭಟನೆ ನಡೆಸಿದ ಬಿಜೆಪಿ, ಸದನದ ಒಳಗೂ ಪ್ರತಿಭಟನೆ ನಡೆಸಲು ಪ್ಲಾನ್ ರೂಪಿಸಿದೆ.
ಕಲಾಪದಲ್ಲಿ ಮುಡಾ ಮತ್ತು ವಾಲ್ಮೀಕಿ ಅಕ್ರಮವನ್ನು ಪ್ರಸ್ತಾಪಿಸಲು ಬಿಜೆಪಿ-ಜೆಡಿಎಸ್ ನಿರ್ಧಾರ ಮಾಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ತಂತ್ರಕ್ಕೆ ಕಾಂಗ್ರೆಸ್ ಕೂಡ ಪ್ರತಿತಂತ್ರ ಹಾಕಲು ಸರ್ವ ರೀತಿಯಲ್ಲೂ ಸಜ್ಜಾಗಿದೆ ಎನ್ನಲಾಗಿದೆ.
ಸದ್ಯ ಇಂದು ಅಗಲಿದ ಗಣ್ಯರಿಗೆ ವಿಧಾನಸಭೆ ಕಲಾಪದಲ್ಲಿ ಸಂತಾಸ ಸೂಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅಸಲಿ ಯುದ್ಧ ಶುರುವಾಗಲಿದೆ ಎನ್ನಲಾಗಿದೆ.
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…