ಬೆಂಗಳೂರು : ಕನ್ನಡಪರ ವಿವಿಧ ಸಂಘಟನೆಗಳು ಮಾ.22ರಂದು ಕರ್ನಾಟಕ ಬಂದ್ ಆಚರಣೆಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳ ಬಗ್ಗೆ ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿಗೆ ತಿಳಿಸಿದರು.
ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಶೂನ್ಯವೇಳೆಯಲ್ಲಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಏಕಾಏಕಿ ಬಂದ್ ಕರೆಯುವ ಅಗತ್ಯವಿರಲಿಲ್ಲ. ಈ ನಿರ್ಧಾರ ಸರಿಯಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಇದಕ್ಕೂ ಮುನ್ನ ಮಾತನಾಡದ ನಾರಾಯಣಸ್ವಾಮಿ ಅವರು, ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಮಾ.22ರಂದು ಬಂದ್ ಕರೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ಗೊಂದಲದ ಪರಿಸ್ಥಿತಿಯನ್ನು ನಿವಾರಣೆ ಮಾಡಲು ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದನ್ನು ತಿಳಿಸಬೇಕೆಂದು ಆಗ್ರಹಿಸಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…