ಬೆಂಗಳೂರು: ರಾಜ್ಯಾದ್ಯಂತ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಇಂದು ಬಂದ್ ಆಚರಣೆ ಮಾಡುತ್ತಿರುವ ವೇಳೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು(ಮಾರ್ಚ್.22) ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಟೌನ್ ಹಾಲ್ ಬಳಿಯಿಂದ ಫ್ರೀಡಂಪಾರ್ಕ್‌ವರೆಗೂ ಪ್ರತಿಭಟನಾ ರ್ಯಾಲಿಗೆ ಮುಂದಾಗಿ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಪ್ರತಿಭಟನಾ ನಡೆಸುವ ವೇಳೆ ಹೋರಾಟಗಾರರು ರಾಜ್ಯ ಸರ್ಕಾರವನ್ನು ಮರಾಠಿ ಏಜೆಂಟ್ ಎಂದು ಘೋಷಣೆ ಕೂಗುತ್ತಿದ್ದರು. ಹೀಗಾಗಿ ಈ ವೇಳೆ ಪ್ರತಿಭಟನಾ ನಿರತ ಹೋರಾಟಗಾರರದ ವಾಟಾಳ್ ನಾಗರಾಜ್ ಮತ್ತು ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ನಲ್ಲಿ ಕರೆದೊಯ್ದಿದ್ದಾರೆ.





