ರಾಜ್ಯ

ಕರ್ನಾಟಕ ಬಂದ್‌: ವಾಟಾಳ್‌ ನಾಗರಾಜ್‌, ಸಾ.ರಾ.ಗೋವಿಂದು ಸೇರಿ ಕನ್ನಡ ಪರ ಹೋರಾಟಗಾರರು ಪೊಲೀಸ್‌ ವಶಕ್ಕೆ

ಬೆಂಗಳೂರು: ರಾಜ್ಯಾದ್ಯಂತ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಇಂದು ಬಂದ್‌ ಆಚರಣೆ ಮಾಡುತ್ತಿರುವ ವೇಳೆ ವಾಟಾಳ್‌ ನಾಗರಾಜ್‌, ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು(ಮಾರ್ಚ್‌.22) ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಟೌನ್‌ ಹಾಲ್‌ ಬಳಿಯಿಂದ ಫ್ರೀಡಂಪಾರ್ಕ್‌ವರೆಗೂ ಪ್ರತಿಭಟನಾ ರ್ಯಾಲಿಗೆ ಮುಂದಾಗಿ ಎಂಇಎಸ್‌ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನು ಪ್ರತಿಭಟನಾ ನಡೆಸುವ ವೇಳೆ ಹೋರಾಟಗಾರರು ರಾಜ್ಯ ಸರ್ಕಾರವನ್ನು ಮರಾಠಿ ಏಜೆಂಟ್‌ ಎಂದು ಘೋಷಣೆ ಕೂಗುತ್ತಿದ್ದರು. ಹೀಗಾಗಿ ಈ ವೇಳೆ ಪ್ರತಿಭಟನಾ ನಿರತ ಹೋರಾಟಗಾರರದ ವಾಟಾಳ್‌ ನಾಗರಾಜ್‌ ಮತ್ತು ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ನಲ್ಲಿ ಕರೆದೊಯ್ದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

3 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

12 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

46 mins ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

1 hour ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

1 hour ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

1 hour ago