Mysore
22
light rain

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

D K Shivakumar

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ವಿಶ್ವದ ಹಲವು ರಾಷ್ಟ್ರಗಳಲ್ಲಿ ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಬಳಕೆಯನ್ನು ನಿಷೇಧಿಸಲಾಗಿದೆ.

ಈ ನಿಟ್ಟಿನಲ್ಲಿ ನಾವು ಕೂಡ ಗಂಭೀರವಾಗ ಚಿಂತನೆ ನಡೆಸುತ್ತಿದ್ದೇವೆ. ಅಂತರಾಷ್ಟ್ರೀಯ ಸಮಿತಿಯ ಮಟ್ಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು.

ಈಗಲೇ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಮುಂದೇನಾಗುತ್ತದೆ ಎಂದು ನೋಡೋಣ. ತಜ್ಞರ ವರದಿ ಹಾಗೂ ಸಾಧಕ-ಬಾಧಕಗಳನ್ನು ಚರ್ಚಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!