Categories: ರಾಜ್ಯ

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ..

ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ ಮನುಷ್ಯರು ಮಾತ್ರವಲ್ಲದೇ ಪ್ರಾಣಿ-ಪಕ್ಷಿಗಳು ಹಾಗೂ ಜಲಚರಗಳು ಸಹ ಬಿಸಿಲ ಬೇಗೆಗೆ ತತ್ತರಿಸಿ ಹೋಗಿವೆ.

ರಾಜ್ಯದ ಎರಡನೇ ಅತಿ ದೊಡ್ಡ ಮೊಟೆ ಹಾಗೂ ಚಿಕನ್‌ ಉತ್ಪಾದನಾ ಕೇಂದ್ರವಾದ ಕೊಪ್ಪಳ ಜಿಲ್ಲೆಯಲ್ಲಿ ಬಿಸಿಲಿನ ತಾಪ ತಾಳಲಾರದೇ ಕೋಳಿಗಳು ಸಾವನ್ನಪ್ಪುತ್ತಿವೆ.

ಇನ್ನು ಬಿಸಿಲಿನ ಬೇಗೆಗೆ ಜಲಮೂಲಗಳು ಬತ್ತುತ್ತಿದ್ದು, ನೀರು ಕಲುಷಿತಗೊಂಡು ಆಮ್ಲಜನಕದ ಕೊರತೆಯಿಂದ ಚಿಕ್ಕಬಳ್ಳಾಪುರದ ಕಂದವಾರ ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಹೈರಾಣಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇನ್ನು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ದಾಟುತ್ತಿದ್ದು, ಬಿಸಿಲಿನಿಂದ ಪಾರಾಗಲು ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಂಬರುವ ದಿನಗಳಲ್ಲಿ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಲಕ್ಷಣಗಳು ಕಾಣಿಸುತ್ತಿವೆ.

 

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

24 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago