ಬೆಂಗಳೂರು: ಸಿಎಂ ಕುರ್ಚಿ ಉಳಿಸಿಕೊಳ್ಳುವ ಮತ್ತು ಒಲಿಸಿಕೊಳ್ಳುವ ಆಟವೇ ಕಾಂಗ್ರೆಸ್ ಸರ್ಕಾರದ ಪ್ರಮುಖ ಅಜೆಂಡಾವಾಗಿದೆ ಎಂದು ಬಿಜೆಪಿ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ ಮುಖ್ಯಮಂತ್ರಿ ಜಗಳ ಬಗೆಹರಿಯುತ್ತಿಲ್ಲ, ಮತ್ತೊಂದು ಕಡೆ ರಾಜ್ಯದ ಅಭಿವೃದ್ಧಿ ನಡೆಯುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಸಭೆ, ಅಭಿವೃದ್ಧಿಗಾಗಿ ಸಭೆ ನಡೆಸಿದ್ದಕ್ಕಿಂತ ಸಿಎಂ ಕುರ್ಚಿಗಾಗಿ ‘ಡಿನ್ನರ್ ಸಭೆ’ ನಡೆಸಿದ್ದೇ ಹೆಚ್ಚು ಎಂದು ವ್ಯಂಗ್ಯವಾಡಿದೆ.
ಒಬ್ಬೊಬ್ಬರು ಸಚಿವರು ಸಭೆ ನಡೆಸಿ, ಮುಂದಿನ ಸಿಎಂ ನಾನೇ ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ಈಗ ಅಧಿಕಾರದಲ್ಲಿರುವ ಸಿಎಂ ಇಂತಹ ಪ್ರಹಸನಗಳನ್ನು ಸೃಷ್ಟಿಸುವುದರಲ್ಲೇ ನಿರತರಾಗಿದ್ದಾರೆ. ಪರಿಣಾಮವಾಗಿ ರಾಜ್ಯ ಅನಾಥವಾಗಿದೆ, ಅಭಿವೃದ್ಧಿಯ ಬಗ್ಗೆ ಕಾಳಜಿಯೇ ಇಲ್ಲವಾಗಿದೆ. ಅಲ್ಲದೇ ಸಿಎಂ ಕುರ್ಚಿ ಉಳಿಸಿಕೊಳ್ಳುವ ಮತ್ತು ಒಲಿಸಿಕೊಳ್ಳುವ ಆಟವೇ ಕಾಂಗ್ರೆಸ್ ಸರ್ಕಾರದ ಪ್ರಮುಖ ಅಜೆಂಡಾವಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…