ಬೆಂಗಳೂರು: ರಾಜ್ಯದ ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ.
ಅದರಂತೆ, ಶಿಕ್ಷಣ ಕ್ಷೇತ್ರಕ್ಕೂ ಬಂಪರ್ ಕೊಡುಗೆ ನೀಡಿದ್ದು, ರಾಜ್ಯದ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗೌರವಧನ ಹೆಚ್ಚಿಸಿದ್ದಾರೆ.
ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಮಾಸಿಕ 2000 ರೂ. ಗೌರವಧನ ಹೆಚ್ಚಿಸಿದ್ದಾರೆ. ಅದರಂತೆ ಬಿಸಿಯೂಟದ ಕಾರ್ಯಕರ್ತೆಯರಿಗೂ ಮಾಸಿಕ 1000ರೂ ಗೌರವಧನ ಹೆಚ್ಚಳ ಮಾಡಿ ಘೋಷಣೆ ಮಾಡಿದ್ದಾರೆ.





