ಬೆಂಗಳೂರು: ಕನ್ನಡ ಸಿನಿಮಾಗಳಿಗಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮವಹಿಸಿಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬಜೆಟ್‌ನಲ್ಲಿ ಘೋಷಿಸಿರುವ ಅವರು, ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ ರೂ.200ಕ್ಕೆ ಸೀಮಿತಗೊಳಿಸಲಾಗುವುದು ಎಂದಿದ್ದಾರೆ.
ಸಿನಿಮಾ ಕ್ಷೇತ್ರವನ್ನು ಕೈಗಾರಿಕೆಯಾಗಿ ಗುರುತಿಸುವುದು. ಚಲನಚಿತ್ರ ಅಕಾಡೆಮಿಯನ್ನು ಅಭಿವೃದ್ಧಿ ಮಾಡಲಾಗುವುದು.
ಪತ್ರಕರ್ತರಿಗೂ ಕೊಡುಗೆ
ಮಾನ್ಯತೆ ಪಡೆದ ಪತ್ರಕರ್ತರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ.
ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಹೆಚ್ಚಳ.
ಕುಟುಂಬ ಮಾಸಾಶನವು ಹೆಚ್ಚಳ.





